ಎಐಸಿಸಿ ಪ್ರಧಾನ ಕಾರ್ಯದರ್ಶಿ ಸರ್ಜೆವಾಲ್ಗೆ ಪಾಟೀಲ್ ಅಭಿನಂದನೆ

0

Gummata Nagari : Bijapur News

ಬಿಜಾಪುರ : ಎ.ಐ.ಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ರಾಜ್ಯದ ಉಸ್ತುವಾರಿಯಾಗಿ ನೇಮಕಗೊಂಡ ರಣದೀಪಸಿಂಗ್ ಸುರ್ಜೆವಾಲ್ ಅವರನ್ನು ಬೆಂಗಳೂರಿನಲ್ಲಿ ಬುಧವಾರ ಹಿರಿಯ ಕಾಂಗ್ರೆಸ್ ನಾಯಕ ಎಂ.ಬಿ.ಪಾಟೀಲ್ ಭೇಟಿಯಾಗಿ ಅಭಿನಂದಿಸಿದರು.

ಕರ್ನಾಟಕದ ರಾಜ್ಯ ಉಸ್ತುವಾರಿಯಾಗಿ ನೇಮಕಗೊಂಡ ನಂತರ ಪ್ರಥಮ ಬಾರಿಗೆ ಬೆಂಗಳೂರಿಗೆ ಆಗಮಿಸಿದ ರಣಜಿತಸಿಂಗ್ ಅವರನ್ನು ಇಂದು ಬೆಳಿಗ್ಗೆ ಕುಮಾರಕೃಪಾ ಅತಿಥಿಗೃಹದಲ್ಲಿ ಎಂ.ಬಿ.ಪಾಟೀಲ್ ಭೇಟಿ ಮಾಡಿ, ಚರ್ಚಿಸಿದರು.

ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಕಾರ್ಯಾಧ್ಯಕ್ಷ ಸಲೀಂ ಅಹಮದ ಮತ್ತಿತರರು ಉಪಸ್ಥಿತರಿದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.