ಮಾನಸಿಕ ಒತ್ತಡ ಕಡಿಮೆಗೊಳಿಸಿದರೆ ಆತ್ಮಹತ್ಯೆ ತಡೆ ಸಾಧ್ಯ

0

Gummata Nagari : Bijapur News

ಬಿಜಾಪುರ : ಮಾನಸಿಕವಾಗಿ ಬಲಿಷ್ಠರಾಗಿರಲು ಸ್ನೇಹಿತರೊಂದಿಗೆ, ಪಾಲಕರೊಂದಿಗೆ ಅಥವಾ ಸಮಾಲೋಚನಾ ಕೇಂದ್ರಕ್ಕೆ ಸಂಪರ್ಕಿಸಿ, ಮಾನಸಿಕ ಒತ್ತಡ ಕಡಿಮೆಗೊಳಿಸುವಲ್ಲಿ ಪ್ರಯತ್ನ ಮಾಡಿದರೆ ಆತ್ಮಹತ್ಯೆ ತಡೆಗಟ್ಟುವಲ್ಲಿ ಸಹಕಾರಿಯಾಗುತ್ತದೆ ಎಂದು ಬಿಜಾಪುರ ಮಾನಸಿಕ ಆರೋಗ್ಯ ಅಧಿಕಾರಿ ಡಾ.ಎಸ್.ಎಂ.ಗುಣಾರಿ ಹೇಳಿದರು.

ಬಿ.ಎಲ್.ಡಿ.ಇ ಬಿ.ಎಂ.ಪಾಟೀಲ್ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಮಾನಸಿಕ ಸಮಾಲೋಚನಾ ಸಮಿತಿ, ಎನ್.ಎಸ್.ಎಸ್. ಮತ್ತು ರಾಷ್ಟ್ರೀಯ ಮಾನಸಿಕ ಆರೋಗ್ಯ ಸಹಯೋಗದೊಂದಿಗೆ ಆಯೋಜಿಸಿದ್ದ ವಿಶ್ವ ಆತ್ಮಹತ್ಯಾ ತಡೆಗಟ್ಟುವ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಅವರು ಮಾನಸಿಕ ಸಮಸ್ಯೆಯನ್ನು ಎದುರಿಸುತ್ತಿರುವವರು ಎಲ್ಲ ತಾಲ್ಲೂಕುಗಳಲ್ಲಿ ಪ್ರಾರಂಭಿಸಲಾದ `ಮನೋ ಚೇತನ’ ಕೇಂದ್ರದಲ್ಲಿ ಪ್ರತಿ ಮಂಗಳವಾರ ಚಿಕಿತ್ಸೆ ಹಾಗೂ ಸಮಾಲೋಚನೆಯಲ್ಲಿ ಪಾಲ್ಗೊಂಡು ಉಪಯೋಗ ಪಡೆದುಕೊಳ್ಳಬೇಕು ಎಂದರು.

ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಂ.ಎಸ್.ಬಿರಾದಾರ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಕಾರ್ಯಭಾರಗಳಿಂದ ಮಾನಸಿಕ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗುವವರ ಸಂಖ್ಯೆ ಇತ್ತು. ಈ ಸಮಯದಲ್ಲಿ ಕೊರೊನಾ ಮಹಾಮಾರಿಯಿಂದ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆಗಳು ಹೆಚ್ಚಳ ಕಂಡುಬAದಿದೆ ಎಂದರು.

ಪ್ರಾಚಾರ್ಯ ಡಾ.ಅರವಿಂದ ಪಾಟೀಲ, ಮನೋವೈದ್ಯಶಾಸ್ತç ವಿಭಾಗ ಪ್ರಾಧ್ಯಾಪಕ ಡಾ.ಸಂತೋಷ ರಾಮದುರ್ಗ, ಡಾ.ಆನಂದ ಪಿ.ಅಂಬಲಿ, ಡಾ.ಆರ್.ಎಸ್. ಬುಲಗೌಡ, ಸತೀಶ ಪಾಟೀಲ ಉಪಸ್ಥಿತರಿದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.