ಪ್ರವಾಹ ಪೀಡಿತ ಪ್ರದೇಶಗಳಿಗೆ ಎಸ್ ಆರ್ ಪಾಟೀಲ ಭೇಟಿ

0

Gummata Nagari : Bijapur News

ಬಿಜಾಪುರ : ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್ ಆರ್ ಪಾಟೀಲ ಭೇಟಿ ನೀಡಿದರು.

ಚಡಚಣ ತಾಲೂಕಿನ ಪ್ರವಾಹ ಪೀಡಿತ ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹದ ಕುರಿತು ಮಾಹಿತಿ ಕಲೆಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿ ಪ್ರವಾಹದ ವೇಳೆ ಸರ್ಕಾರ ನಿರ್ಲಕ್ಷ್ಯವಹಿಸಿದೆ ಎಂದು ಆರೋಪಿಸಿದರು. ಕೂಡಲೆ ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡವರಿಗೆ ಹಾಗೂ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಬಳಿಕ ಇಂಡಿ ಹಾಗೂ ಆಲಮೇಲ ತಾಲೂಕಿನ ಪ್ರವಾಹ ಪೀಡಿತ ಪ್ರದೇಶಗಳತ್ತ ಪ್ರಯಾಣ ಬೆಳಸಿದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.