ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ನಕಲು ಮುಕ್ತಕ್ಕೆ ಡಿಸಿ ಸೂಚನೆ

0

Gummata Nagari : Bijapur News

ಬಿಜಾಪುರ : ಬಿಜಾಪುರ ಜಿಲ್ಲೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಮುನ್ನೆಚ್ಚರಿಕಾ ವ್ಯವಸ್ಥೆ ಹಾಗೂ ನಕಲು ಮುಕ್ತ ಪರೀಕ್ಷೆಗೆ ವಿವಿಧ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ವಭಾವಿ ಕ್ರಮಗಳ ಕುರಿತು ಸಭೆ ನಡೆಸಿದ ಅವರು, ದಿ.21 ರಿಂದ ದಿ.28 ರವರೆಗೆ ನಡೆಯಲಿರುವ ಪರೀಕ್ಷೆಗಾಗಿ ಸಕಲ ಪೂರ್ವ ಸಿದ್ದತೆಗಳನ್ನು ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರದಲ್ಲಿ ಮಾಸ್ಕ್, ಸ್ಯಾನಿಟೈಸರ್ ಹಾಗೂ ಸಾಮಾಜಿಕ ಅಂತರವನ್ನು ವ್ಯವಸ್ಥಿತವಾಗಿ ಕಾಪಾಡಿಕೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು ಅವುಗಳಲ್ಲಿ ಒಟ್ಟು 11,168 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 6 ಸರ್ಕಾರಿ ಪರೀಕ್ಷಾ ಕೇಂದ್ರಗಳು, 21 ಅನುದಾನಿತ ಶಾಲೆಗಳಲ್ಲಿ ಹಾಗೂ 07 ಅನುದಾನ ರಹಿತ ಶಾಲೆಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಹಾಗೂ ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆಯನ್ನು ಮಾಡಿಕೊಂಡಿರಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಆಸನದ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಸಿಬ್ಬಂಧಿಗಳನ್ನು ನಿಯೋಜಿಸಬೇಕು ಹಾಗೂ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಸೆಂಟರ್‌ಗಳನ್ನು ಮಾಡಿಕೊಳ್ಳಬೇಕು ಪರೀಕ್ಷೆ ಬರೆಯಲಿರುವ ಎಲ್ಲ ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಯಾನಿಂಗ್ ಕೈಗೊಳ್ಳಬೇಕು ಎಂದು ಸೂಚಿಸಿದರು.

ಕೋವಿಡ್-19 ಪಾಸಿಟಿವ್ ಹೊಂದಿರುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಪ್ರತ್ಯೇಕ ಕೋಠಡಿ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು ಹಾಗೂ ಅಲ್ಲಿ ಒಬ್ಬರು ನರ್ಸ್, ಆರೋಗ್ಯ ಸಹಾಯಕರು ಹಾಗೂ ಪರೀಕ್ಷಾ ಸಹಾಯಕರನ್ನು ನಿಯೋಜಿಸಬೇಕು. ಅವರಿಗೆ ಮುನ್ನೆಚ್ಚಕಾ ಕ್ರಮವಾಗಿ ಪಿ.ಪಿ.ಇ ಕಿಟ್ ಹಾಗೂ ಮಾಸ್ಕ್ಗಳ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಲಕ್ಷಣಗಳು ಕಂಡು ಬರುವ ವಿದ್ಯಾರ್ಥಿಗಳು ಹಾಗೂ ಥರ್ಮಲ್  ಸ್ಕ್ಯಾನಿಂಗನಲ್ಲಿ ಲಕ್ಷಣಗಳು ಕಂಡು ಬಂದಲ್ಲಿ ಅವರನ್ನು ಪ್ರತ್ಯೇಕ ಕೋಣೆಯಲ್ಲಿ ಪರೀಕ್ಷೆ ಕೈಗೊಳ್ಳಬೇಕು ಎಂದು ಸೂಚಿಸಿದರು.

ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಪ್ರತಿ ಡೆಸ್ಕ್ಗೆ ಇಬ್ಬರಂತೆ ಹಾಗೂ ಅಂತರವನ್ನು ಕಾಯ್ದುಕೊಳ್ಳುವಂತೆ ಸೂಚಿಸಬೇಕು. ಪರೀಕ್ಷೆ ಸಂದರ್ಭದಲ್ಲಿ ಪರೀಕ್ಷಾ ಮೇಲ್ವಿಚಾರಕರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಹಾಗೂ ಪರೀಕ್ಷೆ ಮುಗಿಯುವವರೆಗೆ ತಗೆಯುವಂತಿಲ್ಲ ಎಂದು ಸೂಚಿಸಿದರು.

ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಸಿಬ್ಬಂದಿಗಳು ಅಧಿಕಾರಿಗಳು ಹಾಗೂ ಇತರರು ಮೋಬೈಲ್ ತರುವಂತಿಲ್ಲ, ಪರೀಕ್ಷಾ ಕೇಂದ್ರದ ಮುಖ್ಯ ಅಧಿಕ್ಷಕರು ಮಾತ್ರ ಬೇಸಿಕ್ ಮೋಬೈಲ್ ಬಳಸಬಹುದಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ಬೆಳಿಗ್ಗೆ 9 ಗಂಟೆಯಿAದ ಪರೀಕ್ಷೆ ಮುಗಿಯುವವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿ ಪರೀಕ್ಷಾ ಕೇಂದ್ರದ ಸಮೀಪದ ಝರಾಕ್ಸ್ ಅಂಗಡಿ, ಕಂಪ್ಯೂಟರ್ ಸೆಂಟರ್ ಸೈಬರ್ ಕೆಫೆ, ಕೋಚಿಂಗ್ ಕೇಂದ್ರಗಳನ್ನು ತೆರೆಯದಂತೆ ನೋಡಿಕೊಳ್ಳಲು ಸೂಚಿಸಿದರು.

ಎಸ್.ಎಸ್.ಎಲ್.ಸಿ ಪರೀಕ್ಷಾ ಮಂಡಳಿಯ ರಾಜ್ಯ ಉಸ್ತುವಾರಿ ಅಧಿಕಾರಿ ರಾಜೀವ್ ನಾಯಕ್, ಸಹ-ನಿರ್ದೇಶಕ ಬಸೀರ್ ಅಹ್ಮದ್, ವೀಕ್ಷಣಾಧಿಕಾರಿ ನಂದನೂರ, ಡಿಡಿಪಿಐ ಪ್ರಸನ್ನ ಕುಮಾರ, ಎಸ್.ಎಸ್.ಎಲ್.ಸಿ ಪರೀಕ್ಷಾ ನೋಡೆಲ್ ಅಧಿಕಾರಿ ಎಸ್.ಎ ಮುಜಾವರ, ಡಿಎಚ್‌ಓ ಡಾ.ಮಹೇಂದ್ರ ಕಾಪ್ಸೆ ಪಾಲ್ಗೊಂಡಿದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.