ಶಿಕ್ಷಕ ಸಮಾಜದ ಕನ್ನಡಿಯಿದ್ದಂತೆ

0

Gummata Nagari

ಚಡಚಣ : ಅನಾದಿ ಕಾಲದಿಂದಲೂ ಗುರುವಿಗೆ ಸಮಾಜದಲ್ಲಿ ದೊಡ್ಡ ಸ್ಥಾನವಿದೆ.ಮಕ್ಕಳಿಗೆ ವಿದ್ಯೆಯೊಂದಿಗೆ ನೈತಿಕ ಮೌಲ್ಯಗಳನ್ನು ಕಲಿಸಿಕೊಡುವ ಶಿಕ್ಷಕರು ಉತ್ತಮ ಸಮಾಜದ ಕನ್ನಡಿಯಾಗಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ ಹೇಳಿದರು

ಪಟ್ಟಣದ ಜಿ.ಪಿ.ಫಾರ್ಮಸಿ ಕಾಲೇಜು ಆವರಣದಲ್ಲಿ ಚಡಚಣ ತಾಲ್ಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಆಶ್ರಯದಲ್ಲಿ ಮಂಗಳವಾರ ಆಯೋಜಿಸಲಾದ ಶಿಕ್ಷಕರ ದಿನಾಚರಣೆ ಹಾಗೂ ಆದರ್ಶ ಶಿಕ್ಷಕರ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಸ್ತಾವಿಕವಾಗಿ ತಾಲ್ಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಶಂಕರ ಹಾವಿನಾಳ ಮಾತನಾಡಿ, ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳು ಹಾಗೂ ಕಾರ್ಯ ನಿರ್ವಹಿಸುವ ಶಿಕ್ಷಕರು ಆರ್ಥಿಕ  ಸಂಕಷ್ಟದಲ್ಲಿ ಸಿಲುಕಿದ್ದಾರೆ.ಅವರ ಬೇಡಿಕೆ ಈಡೇರಿಕೆಗೆ ಸರ್ಕಾರ ತುರ್ತು ಆರ್ಥಿಕ  ಸಹಾಯ ಘೋಷಣೆ ಮಾಡಬೇಕು ಎಂದರು.

ವಿಶೇಷ ಉಪನ್ಯಾಸ ನೀಡಿದ ಸಂಗಮೇಶ್ವರ ಪದವಿ ಮಹಾವಿದ್ಯಾಲಯದ ಪ್ರಾಧ್ಯಾಪಕ ಡಾ.ಎಸ್.ಎಸ್.ದೇಸಾಯಿ ಮಾತನಾಡಿ, ಶಿಕ್ಷಣ ಕೇತ್ರದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರವಾದುದು. ಸರ್ಕಾರ  ಅನುದಾನ ರಹಿತ ಶಿಕ್ಷಣ ಸಂಸ್ಥೆಗಳನ್ನು ಅನುದಾನಕ್ಕೆ ಒಳಪಡಿಸಿ,ಅವರಿಗೆ ಆತ್ಮ ಸ್ಥೈರ್ಯ ತುಂಬುವ ಕೆಲಸಕ್ಕೆ ಮುಂದಾಗಬೇಕು ಎಂದರು.

ರೂಪಸಾ ಸಂಘಟನೆಯ ಜಿಲ್ಲಾ ಸಂಚಾಲಕ ಎನ್.ಎಸ್.ಮುಕ್ಕಣ್ಣ,ಶಿಕ್ಷಣ ಪ್ರೇಮಿ ಎಂ.ಎಸ್ ಕೊಪ್ಪ ,ಹಾಗೂ ಸಂಗಮೇಶ್ವರ ಶಿಕ್ಷಣ ಸಂಸ್ಥೆಯ ನಿರ್ದೇಶಕ ಬಸವರಾಜ ಯಂಕಂಚಿ ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಸಂಸ್ಥೆಯ ಆಡಳಿತ ಮಂಡಳಿ ಒಗ್ಗಟ್ಟಿನಿಂದ ಹೋರಾಟ ನಡೆಸಿ,ಸರ್ಕಾರದ ಸೌಲಭ್ಯ ಪಡೆದುಕೊಳ್ಳಬೇಕು ಎಂದರು.

ಸಾನಿಧ್ಯ ವಹಿಸಿದ ಹತ್ತಳ್ಳಿ ಹಿರೇಮಠ ಗುರುಪಾದೇಶ್ವರ ಶಿವಾಚಾರ್ಯ ಆಶಿರ್ವಚನ ನೀಡಿದರು.

ಕರ್ನಾಟಕ  ರಾಜ್ಯ ಮಾಧ್ಯಮಿಕ ಶಾಲಾ ನೌಕರ ಸಂಘದ ತಾಲ್ಲೂಕು ಅಧ್ಯಕ್ಷ ಎ.ಎಸ್.ಕರ್ಜಗಿ, ಚಡಚಣ ತಾಲ್ಲೂಕು ಖಾಸಗಿ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಗೌರವಾಧ್ಯಕ್ಷ ಸಿದ್ದಣ್ಣ ಬಿರಾದಾರ,ನಿರ್ದೇಶಕ ಕೆ.ಪಿ.ಬೋಳೆಗಾಂವ,ಮಹೇಶ ಹಿರೇಮಠ,ರವಿ ಬಿರಾದಾರ, ಸುಭಾಶ್ಚಂದ್ರ ಪೊದ್ದಾರ, ರಮೇಶ ಜಿತ್ತಿ, ಸಿದ್ದು ತೇಲಿ,ಎ.ಆರ್.ಸೌದಿ,ರಾಜಶೇಖರ ವಾಲಿ, ಎ.ಬಿ.ಪಾಟೀಲ, ಎ.ಡಿ.ಬೈರಗೊಂಡ, ಇದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.