ಯಾದಗಿರಿ : ಪಶು ಸಂಗೋಪನೆ, ವಕ್ಫ್, ಹಜ್ ಹಾಗೂ ಬೀದರ-ಯಾದಗಿರಿ ಉಸ್ತುವಾರಿ ಸಚಿವರಾದ ಪ್ರಭು ಚವ್ಹಾಣ್ ಅವರು ಇನ್ನು ಒಂದು ವಾರದವರೆಗೆ ಹೋಂ ಕ್ವಾರಂಟೈನ್ನಲ್ಲಿ ಇರಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳಾದ ಶಿವಕುಮಾರ ಕಟ್ಟೆ ಅವರು ತಿಳಿಸಿದ್ದಾರೆ.
ಸಚಿವರಿಗೆ ಕೊರೊನಾ ಸೋಂಕು ದೃಢಪಟ್ಟು, ನಂತರ ವರದಿ ನೆಗೆಟಿವ್ ಬಂದಿತ್ತಾದರೂ ವೈದ್ಯರ ಸಲಹೆ ಮೇರೆಗೆ ಹೋಂ ಕ್ವಾರಂಟೈನ್ ಆಗಿದ್ದರು. ಈಗಲೂ ಸಚಿವರು ಪೂರ್ಣ ಪ್ರಮಾಣದಲ್ಲಿ ಗುಣಮುಖರಾಗಿರುವುದಿಲ್ಲ. ಅವರಿಗೆ ದೈಹಿಕ ನಿಶ್ಯಕ್ತಿ ಇರುವುದರಿಂದ ವೈದ್ಯರ ಸಲಹೆಯ ಮೇರೆಗೆ ಇನ್ನು ಒಂದು ವಾರ ಕಾಲ ಮನೆಯಲ್ಲಿಯಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಸಚಿವರು ಸಾರ್ವಜನಿಕರ ಭೇಟಿಗೆ ಅಲಭ್ಯರಿರುವುದರಿಂದ ಸಾರ್ವಜನಿಕರು ಸಹಕರಿಸುವಂತೆ ಕೋರಿದ್ದಾರೆ. ಅಗತ್ಯ ಕರ್ತವ್ಯಗಳಿಗೆ ಸಚಿವರು ದೂರವಾಣಿಯಲ್ಲಿ ಲಭ್ಯರಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ Facebook । Twitter । YouTube । Instagram ಅನುಸರಿಸಿ..