ವಸತಿ ಶಿಕ್ಷಣ ಪದ್ಧತಿ ದೇಶದ ಗಮನ ಸೆಳೆದಿದೆ

0

ವಸತಿ ಶಿಕ್ಷಣ ‌ಪದ್ಧತಿಯು ದೇಶದ ಗಮನಸೆಳೆದು ನೂತನ ಶಿಕ್ಷಣ ನೀತಿಯಲ್ಲೂ ಉಲ್ಲೇಖಿಸಿ, ಇದೇ ಮಾದರಿಯಲ್ಲಿ ಇತರ ರಾಜ್ಯಗಳಲ್ಲಿ ಪ್ರಾರಂಭಿಸಲು ಕ್ರಮಕೈಗೊಳ್ಳುವಂತೆ ಪ್ರಸ್ತಾಪಿಸಲಾಗಿದೆ.
-ಗೋವಿಂದ ಎಂ ಕಾರಜೋಳ, ಉಪಮುಖ್ಯಮಂತ್ರಿ

Gummata Nagari ದಾವಣಗೆರೆ

ದಾವಣಗೆರೆ : ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣದೊಂದಿಗೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸುತ್ತಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳ ಶೈಕ್ಷಣಿಕ ಪದ್ಧತಿ ಖ್ಯಾತಿಗಳಿಸಿದ್ದು, ದೇಶದ ಗಮನಸೆಳೆದಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದರು.
ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಶಿಕ್ಷಣ, ಪರಿಶಿಷ್ಟರ ಕಲ್ಯಾಣ, ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡುತ್ತಿದೆ. ರಾಜ್ಯದಲ್ಲಿ 824 ವಸತಿ ಶಾಲೆಗಳಲ್ಲೂ ಅತ್ಯುತ್ತಮವಾದ ಶಿಕ್ಷಣ ನೀಡಿ, ಕಳೆದ ಎಸ್ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ವಾದ ಫಲಿತಾಂಶ ಪಡೆದಿವೆ. ಈ‌ ವಸತಿ ಶಿಕ್ಷಣ ‌ಪದ್ಧತಿಯು ದೇಶದ ಗಮನಸೆಳೆದು ನೂತನ ಶಿಕ್ಷಣ ನೀತಿಯಲ್ಲೂ ಉಲ್ಲೇಖಿಸಿ, ಇದೇ ಮಾದರಿಯಲ್ಲಿ ಇತರ ರಾಜ್ಯಗಳಲ್ಲಿ ಪ್ರಾರಂಭಿಸಲು ಕ್ರಮಕೈಗೊಳ್ಳುವಂತೆ ಪ್ರಸ್ತಾಪಿಸಲಾಗಿದೆ. ಕಳೆದ ಒಂದು ವರ್ಷದಲ್ಲಿ 59 ವಸತಿ ಶಾಲೆಗಳನ್ನು ನಿರ್ಮಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆಯ ಎಸ್ ಸಿಪಿ ಮತ್ತು ಟಿಎಸ್ ಪಿ ಯೋಜನೆಯ ಅನುದಾನದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ 25ವಸತಿ ಶಾಲೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಉಪಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ, ಸಚಿವರಾದ ಬಿ.ಎ.ಬಸವರಾಜ್, ಸಂಸದರಾದ ಸಿದ್ದೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಮತ್ತಿತರರು ಉಪಸ್ಥಿತರಿದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.