Gummata Nagari

Bijapur

ರಾಜ್ಯದಲ್ಲಿ ಭರ್ಜರಿ ಮತದಾನ: ಸೆಲೆಬ್ರೆಟಿಗಳು ವೋಟಿಂಗ್

 

ಬೆAಗಳೂರು: ರಾಜ್ಯದ ದಕ್ಷಿಣ ಭಾಗದಲ್ಲಿನ 14 ಲೋಕಸಭಾ ಕ್ಷೇತ್ರಗಳಿಗೆ ಇಂದು ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆದಿದೆ. ಬಿಸಿಲೇರುವ ಮುನ್ನ ಮತದಾನ ಮಾಡಬೇಕು ಎಂಬ ಇರಾದೆಯಲ್ಲಿ ಬಹಳಷ್ಟು ಮಂದಿ ಬೆಳಿಗ್ಗೆ 6 ಗಂಟೆಯಿAದಲೇ ಮತಗಟ್ಟೆಯ ಮುಂದೆ ಸಾಲುಗಟ್ಟಿ ನಿಂತಿದ್ದು ಕಂಡುಬAದಿತು.

ಹಾಸನದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತಮ್ಮ ಪತ್ನಿ ಚೆನ್ನಮ್ಮ ಅವರೊಂದಿಗೆ ಮತಗಟ್ಟೆಗೆ ಬಂದು ಮತ ಚಲಾಯಿಸುವ ಸಂದರ್ಭದಲ್ಲಿ ಚುನಾವಣಾ ಸಿಬ್ಬಂದಿಗಳು ಅವರಿಗೆ ಸಹಾಯ ಮಾಡಿದರು. ಇದೇ ವೇಳೆ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ, ಮಾಜಿ ಸಚಿವ ಎಚ್.ಡಿ.ರೇವಣ್ಣ ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಮತ ಚಲಾಯಿಸಿದರು. ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ರವರು ಸಾತನೂರಿನ ದೊಡ್ಡಆಲನಹಳ್ಳಿಯಲ್ಲಿ ಕುಟುಂಬ ಸಮೇತರಾಗಿ ಮತ ಚಲಾಯಿಸಿದರು. ಈ ವೇಳೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಕೂಡ ತಮ್ಮ ಹಕ್ಕು ಚಲಾಯಿಸಿದರು.

ಕೆಲವೆಡೆ ಉದ್ದನೆಯ ಸರದಿ ಸಾಲಿನಲ್ಲಿ ನಿಂತು ಮತ ಚಲಾವಣೆ ಮಾಡಲಾಯಿತು. ಇನ್‌ಫೋಸಿಸ್‌ನ ಸಂಸ್ಥಾಪಕ ನಾರಾಯಣಮೂರ್ತಿ ಮತ್ತು ಅವರ ಪತ್ನಿ, ರಾಜ್ಯಸಭಾ ಸದಸ್ಯೆ ಸುಧಾಮೂರ್ತಿಯವರು ಜಯನಗರದಲ್ಲಿ ಮತದಾನ ಮಾಡಿದರು. ಚುನಾವಣಾ ಮುಖ್ಯ ಅಧಿಕಾರಿ ಮನೋಜ್‌ಕುಮಾರ್ ಮೀನಾ, ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಜಕ್ಕೂರು ಪ್ರದೇಶದಲ್ಲಿರುವ ಮತಗಟ್ಟೆಯಲ್ಲಿ ಕುಟುಂಬ ಸಮೇತರಾಗಿ ನಿಂತು ಮತದಾನ ಮಾಡಿದರು.
ಮೈಸೂರಿನಲ್ಲಿ 101 ವರ್ಷದ ಅಜ್ಜಿ ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸುವ ಮೂಲಕ ಗಮನ ಸೆಳೆದರೆ, ಬಿಜೆಪಿ ಅಭ್ಯರ್ಥಿಯಾಗಿರುವ ರಾಜಮನೆತನದ ಯದುವೀರ್ ಕೃಷ್ಣದತ್ತ ಒಡೆಯರ್, ಪತ್ನಿ ತ್ರಿಷಿಕಾ, ಅವರ ತಾಯಿ ಪ್ರಮೋದಾ ದೇವಿ ಅವರುಗಳು ಕುಟುಂಬ ಸಮೇತರಾಗಿ ಆಗಮಿಸಿ ಮತ ಚಲಾಯಿಸಿದರು.
ಬೆಂಗಳೂರಿನಲ್ಲಿ ಕ್ರಿಕೆಟಿಗ ರಾಹುಲ್‌ದ್ರಾವಿಡ್, ಹಿರಿಯ ನಟ ಹಾಗೂ ನಿರ್ಮಾಪಕ ರಾಘವೇಂದ್ರ ರಾಜ್‌ಕುಮಾರ್, ಪತ್ನಿ ಮಂಗಳ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್, ಸದಾಶಿವನಗರದ ಮತಗಟ್ಟೆಯಲ್ಲಿ, ಹಿರಿಯ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್À್ಮ ಮಲ್ಲೇಶ್ವರÀಂನಲ್ಲಿ, ನಟಿ ಅಮೂಲ್ಯ ಪತಿ ಜಗದೀಶ್ ಅವರೊಂದಿಗೆ, ಗೋಲ್ಡನ್ ಸ್ಟಾರ್ ಗಣೇಶ್ ಪತ್ನಿ ಶಿಲ್ಪಾ ಅವರೊಂದಿಗೆ ಬಂದು ಮತ ಚಲಾಯಿಸಿದರು. ಗೃಹಸಚಿವ ಡಾ.ಜಿ.ಪರಮೇಶ್ವರ್ ತುಮಕೂರಿನ ಹೆಗ್ಗೆರೆಯಲ್ಲಿ, ಚಿಕ್ಕಬಳ್ಳಾಪುರದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಕೆರೆಸಂದ್ರದಲ್ಲಿ ಮತ ಚಲಾಯಿಸಿದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಅವರ ಪುತ್ರಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಅವರೊಂದಿಗೆ ಆಗಮಿಸಿ ಮತ ಚಲಾಯಿಸಿದರು. ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ ಹಾಗೂ ಸಂಸದ ಡಿ.ವಿ.ಸದಾನಂದಗೌಡ, ನಟಿ ಸಪ್ತಮಿಗೌಡ, ಹಿರಿಯ ನಟ ಪ್ರಕಾಶ್ ರೈ ಅವರುಗಳೂ ಮತ ಚಲಾಯಿಸಿದ್ದಾರೆ.

Most Popular

To Top
error: Content is protected !!