Gummata Nagari

Headlines

ನನಗೆ ಜೀವ ಬೆದರಿಕೆ ಪತ್ರ ಬಂದಿದೆ ಎಂದ ಸಚಿವ ಪ್ರಿಯಾಂಕ ಖರ್ಗೆ

 

ಕಲಬುರಗಿ: ಗಲಭೆ ಸೃಷ್ಟಿ ಮಾಡಿ ಬಿಜೆಪಿಯವರು ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ ಚುನಾವಣೆ ಗೆಲ್ಲುವ ಪ್ಲಾನ್ ಮಾಡುತ್ತಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ, ತನಗೆ ಮತ್ತೊಂದು ಜೀವ ಬೆದರಿಕೆ ಪತ್ರ ಬಂದಿರುವುದಾಗಿ ಮತ್ತು ಅದರಲ್ಲಿ ತನ್ನನ್ನು ಎನ್ಕೌಂಟರ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ನೀವೇ (ಬಿಜೆಪಿ) ಈ ಚುನಾವಣೆಯಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದೀರಿ. ಗೊಂದಲ ಸೃಷ್ಟಿಸಿ ಕಾನೂನು ಸುವ್ಯವಸ್ಥೆ ಹಾಳು ಮಾಡುತ್ತಿದ್ದೀರಿ. ಗಲಭೆ ಸೃಷ್ಟಿ ಮಾಡಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದರೂ ಚುನಾವಣೆ ಗೆಲ್ಲಬೇಕು ಎಂಬ ಪ್ಲಾನ್ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಬಿಜೆಪಿಯವರಿಗೆ ನಮ್ಮನ್ನ ರಾಜಕೀಯವಾಗಿ ಎದುರಿಸಲು ಆಗುತ್ತಿಲ್ಲ. ಹೀಗಾಗೇ ವೈಯಕ್ತಿಕವಾಗಿ ಟಾರ್ಗೇಟ್ ಮಾಡುತ್ತಿದ್ದಾರೆ. ಇದಕ್ಕೆಲ್ಲಾ ನಾನೂ ಹೆದರುವುದಿಲ್ಲ. “ನಾನು ಬಳೆ ತೊಟ್ಟುಕೊಂಡಿಲ್ಲ, ಆಖಾಡದಲ್ಲಿ ರೆಡಿಯಿದ್ದೇನೆ” ಎಂದು ಸಂಸದ ಉಮೇಶ್ ಜಾದವ್ ಅವರೇ ಹೇಳುತ್ತಾರೆ. ಇದಕ್ಕೆ ನಮ್ಮ ಸಂಸದರು ಉತ್ತರ ನೀಡಬೇಕು. ನೇರವಗಿ ಮನುವಾದಿಗಳೇ ಬೇದರಿಕೆ ಹಾಕುತ್ತಿದ್ದಾರೆ ಎಂದರು.

ಬೆದರಿಕೆ ಸಂಬAಧ ಮಾರ್ಚ್ 13 ರಂದು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದೇನೆ. ವಿಕಾಸೌಧದಲ್ಲಿರುವ ನನ್ನ ಕಚೇರಿಗೆ ಕಲಬುರಗಿಯಿಂದಲೇ ಪತ್ರ ಬಂದಿದೆ. ಹೆದರಿಸುವುದು ಅಥವಾ ಬೆದರಿಸಲು ಬಂದರೆ ನಾವು ಹೆದರುವುದಿಲ್ಲ ಎಂದರು.

Most Popular

To Top
error: Content is protected !!