Gummata Nagari

Bijapur

ಬಿಜಾಪುರ: ನೇಹಾ ಕೊಲೆ ಖಂಡಿಸಿ ಎಬಿವಿಪಿಯಿಂದ ಪ್ರತಿಭಟನೆ

ಬಿಜಾಪುರ: ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರನ್ನು ಪಯಾಜ್ ಎಂಬ ಆರೋಪಿ ಭೀಕರ ಹತ್ಯೆ ಮಾಡಿರುವದನ್ನು ಖಂಡಿಸಿ ನಗರದಲ್ಲಿ ಇಂದು (ಶನಿವಾರದಂದು) ಇಲ್ಲಿನ ಗಾಂಧಿವೃತ್ತದ ಮೂಲಕ ಬೃಹತ್ ಪ್ರತಿಭಟನೆ ಮಾಡಿದರು.

ರಾಷ್ಟಿçÃಯ ಕಲಾ ಮಂಚ ಪ್ರಾಂತ ಸಹ ಪ್ರಮುಖರಾದ ಸುರೇಖಾ ಕುಲಕರ್ಣಿ ಮಾತನಾಡಿ ಶಾಲಾ ಕಾಲೇಜುಗಳು ಜ್ಞಾನದ ದೇಗುಲಗಳು ಇಂತಹ ದೇಗುಲದಲ್ಲಿ ಹಾಡು ಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠಳನ್ನು ಭೀಕರ ಹತ್ಯೆಯನ್ನು ಮಾಡಿರುವ ಘಟನೆ ನಿಜಕ್ಕೂ ವಿದ್ಯಾರ್ಥಿ ಸಮುದಾಯದಲ್ಲಿ ಭಯದ ವಾತಾವರಣ ಮೂಡಿಸಿದಂತಾಗಿದೆ. ಕೆ.ಎಲ್.ಇ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವಳನ್ನು ಜಿಹಾದಿ ಕ್ರೂರ ಮನಸ್ಥಿತಿಯ ಪಯಾಜ್ ಎಂಬಾತ ಲವ್ ಜಿಹಾದಿಗಾಗಿ ಅವಳನ್ನು ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ. ಈ ಪ್ರೀತಿಯನ್ನು ವಿದ್ಯಾರ್ಥಿನಿ ನಿರಾಕರಿಸಿದಕ್ಕಾಗಿ ಆಕೆಯ ಕಾಲೇಜಿಗೆ ಆಕ್ರಮವಾಗಿ ಪ್ರವೇಶಿಸಿ ಚಾಕುವಿನಿಂದ 9 ಬಾರಿ ಇರಿದು ಬರ್ಬರವಾಗಿ ಹತ್ಯೆಮಾಡಲಾಗಿದೆ ಎಂದು ದೂರಿದರು.

ಕಾಲೇಜಿನ ಒಳಗೆ ಬಂದು ವಿದ್ಯಾರ್ಥಿನಿಯನ್ನು ಹತ್ಯೆ ಮಾಡಲು ಸಾಧ್ಯವಾಗಿರಬೇಕಾದರೆ ಕೊಲೆಗಾರನಿಗೆ ಕಾನೂನಿನ ಯಾವುದೇ ಭಯವೂ ಇಲ್ಲದೆ ರಾಜಾರೋಷವಾಗಿ ಕ್ರತ್ಯ ಮಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದರೆ ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟು ಕುಸಿದು ಹೋಗಿದೆ ಎನ್ನುವುದು ಸ್ಪಷ್ಟವಾಗಿ ತಿಳಿಯುವಂತಾಗಿದೆ. ಈ ಘಟನೆಯಿಂದ ರಾಜ್ಯದ ವಿದ್ಯಾರ್ಥಿ ಸಮುದಾಯ ಭಯಭೀತ ಗೊಂಡಿದೆ. ಪೊಲೀಸರು ಕೂಡಲೇ ಸೂಕ್ತ ತನಿಖೆಯನ್ನು ಕೈಗೊಂಡು, ಅಪರಾಧಿಗೆ ಉಗ್ರ ಶಿಕ್ಷೆ ಆಗುವ ಹಾಗೆ ಮಾಡಿ ವಿದ್ಯಾರ್ಥಿನಿಯ ಕುಂಟುAಬಕ್ಕೆ ನ್ಯಾಯ ಒದಗಿಸಬೇಕಾಗಿದೆ. ಜತೆಗೆ ರಾಜ್ಯಾಧ್ಯಂತ ಪೊಲೀಸರು ಶಾಲಾ ಕಾಲೇಜುಗಳ ಬಳಿ ಮಪ್ತಿಯಲ್ಲಿ ಕಾರ್ಯನಿರ್ವಹಿಸಿ ಸಂಭಾವ್ಯ ಘಟನೆಗಳನ್ನು ತಡೆಯಲು ಪ್ರಯತ್ನಿಸಬೇಕೆಂದರು.

ಜಿಲ್ಲಾ ಸಂಚಾಲಕರಾದ ಮಂಜುನಾಥ ಹಳ್ಳಿ ಮಾತನಾಡಿ, ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಕಾನೂನು ಸುವ್ಯವಸ್ಥೆಯ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿ ಕಾರ್ಯ ಪ್ರವೃತ್ತರಾಗಬೇಕು. ಸರ್ಕಾರಗಳು ಇಂತಹ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಕಾನೂನಿನ ಭಯ ಇಲ್ಲದಾಗ ಮಾತ್ರ ಇಂತಹ ಘಟನೆಗಳು ನಡೆಯಲು ಸಾಧ್ಯ, ಕಾಲೇಜು ಕ್ಯಾಂಪಸ್‌ಗಳು ಸುರಕ್ಷತೆಯ ಕೇಂದ್ರಗಳಾಗಬೇಕು, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಗಮನಹರಿಸಬೇಕು ಹಾಗೂ ಉನ್ನತ ಮಟ್ಟದ ತನಿಖೆ ಮಾಡಬೇಕು, ಅಗತ್ಯ ಎಂದು ಕಂಡರೆ ಪ್ರಕರಣದ ತನಿಖೆಯನ್ನು ಸಿಬಿಐ ತನಿಖೆಗೆ ಹಸ್ತಾಂತರ ಮಾಡಬೇಕು. ಆರೋಫಿಗೆ ಶಿಕ್ಷೆಯನ್ನು ಒದಗಿಸಲು ಸರಕಾರಕ್ಕೆ ಶಕ್ತಿ ಸಾಮರ್ಥ್ಯವಿಲ್ಲವೆಂಧರೆ ವಿದ್ಯಾರ್ಥಿ ಪರಿಷತ್ ಕೈಯಲ್ಲಿ ತಮ್ಮ ಆಡಳಿವನ್ನು ಕೊಡಿ ತಕ್ಷಣವೇ ಇಂತಹ ವ್ಯಕ್ತಿಗೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಬಳಿಕ ಜಿಲ್ಲಾಧಿಕಾರಿಗಳ ಕಚೇರಿ ವರೆಗೆ ತೆರಳಿ ಜಿಲ್ಲಾಧಿಕಾರಿಗಳ ಮೂಲಕ ಮೂಲಕ ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು.

 

ಈ ಸಂಧರ್ಭದಲ್ಲಿ ಸಿದ್ದು ಪತ್ತಾರ, ಪ್ರವೀಣ ಬಿರಾದಾರ, ಮಹಾಂತೇಶ ಕಂಬಾರ, ಸಂದೀಪ ಅರಳಗುಂಡಿ, ಶ್ರವಣ ಕಾತ್ರಾಳ, ರೇಖಾ ಮಾಳಿ, ಸುಜ್ಞಾತಾ ಕುಲಕರ್ಣಿ, ಪೂಜಾ ವೀರಶೆಟ್ಟಿ, ಜ್ಯೋತಿ ಸಜ್ಜನ, ಐಶ್ವರ್ಯ ಆಸಂಗಿ, ಪವಿತ್ರಾ, ಬಾಲಾಜಿ ಬಿರಾದಾರ, ಶಿವಾಜಿ, ದುಂಡಪ್ಪ, ರಮೇಶ, ಶ್ರೀಕಾಂತ, ಬಾಬುರಾವ, ಸಿದ್ದಾರ್ಥ, ಪ್ರವೀಣ, ಸುಮಾರು 200ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಹಾಜರಿದ್ದರು.

Most Popular

To Top
error: Content is protected !!