Gummata Nagari

Bijapur

ಕೇಂದ್ರ ಸ್ಥಾನದಲ್ಲಿ ವಾಸ್ತವ್ಯಕ್ಕೆ ಪಿಡಿಒಗಳ ನಕಾರ

 

 

ಕೊಲ್ಹಾರ: ವಿಕೇಂದ್ರಿಕರಣ ವ್ಯವಸ್ಥೆಯಲ್ಲಿ ಗ್ರಾಮ ಪಂಚಾಯತಿಗಳು ಸ್ಥಳೀಯ ಸರ್ಕಾರಗಳಾಗಿ ಕರ್ತವ್ಯ ನಿರ್ವಹಿಸಬೇಕೆಂಬ ಉದ್ದೇಶದಿಂದ ಗ್ರಾಮ ಪಂಚಾಯತಿಗಳಿಗೆ ಸರ್ಕಾರ ಹೆಚ್ಚಿನ ಅಧಿಕಾರ ಹಾಗೂ ಜವಾಬ್ದಾರಿಗಳನ್ನು ನೀಡಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸಲು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿ ಕಾರ್ಯದರ್ಶಿಗಳು ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳಿಗೆ ಕೇಂದ್ರ ಸ್ಥಾನದಲ್ಲಿ ವಾಸವಿರುವಂತೆ
ನಿರ್ದೇಶನ ನೀಡಿದ್ದರು ಕೂಡ ತಾಲೂಕ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಸರಕಾರದ ನಿಯಮಗಳ ಪಾಲನೆ ಮಾಡುತ್ತಿಲ್ಲ ಎಂಬ ದೂರುಗಳ ಕೇಳಿ ಬರುತ್ತಿವೆ.
ಸ್ಥಳೀಯ ಆಡಳಿತ ಕೇಂದ್ರ ಎಂದು ಕರೆಯಿಸಿಕೊಳ್ಳುವ ಗ್ರಾಮ ಪಂಚಾಯತಿಯ ಜವಾಬ್ದಾರಿಗಳು ಕೂಡ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದೆ ಕುಡಿಯುವ ನೀರು, ವಿದ್ಯುತ್, ವಸತಿ, ಸ್ವಚ್ಛ ಗ್ರಾಮ ಆಂದೋಲನ, ಮಹಾತ್ಮ ಗಾಂಧೀಜಿ ಉದ್ಯೋಗ ಖಾತ್ರಿ ಯೋಜನೆ, ಕಡ್ಡಾಯ ಶೌಚಾಲಯ ನಿರ್ಮಾಣ ಇನ್ನಿತರ ಹಲವಾರು ಕಾರ್ಯಕ್ರಮಗಳ ನಿರ್ವಹಣೆಯ ಜವಾಬ್ದಾರಿ ಹೊತ್ತಿರುವ ಗ್ರಾಮ ಪಂಚಾಯತಿಗಳಿಗೆ ಕೇಂದ್ರ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುವ
ಅಧಿಕಾರಿಗಳ ಅವಶ್ಯಕತೆ ಮುಖ್ಯವಾಗಿದೆ.
ಗ್ರಾಮ ಪಂಚಾಯಿತಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಧ್ವನಿಯಾಗಿ ನಿಲ್ಲಬೇಕು ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಹಿತ ಕಾರ್ಯದರ್ಶಿ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಕೇಂದ್ರ ಸ್ಥಾನದಲ್ಲಿಯೇ ವಾಸವಾಗಿದ್ದು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕರ ಕುಂದು ಕೊರತೆಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸುವAತೆ ಸರ್ಕಾರದ ಸ್ಪಷ್ಟವಾದ ನಿರ್ದೇಶನ ಇದ್ದರು ಕೂಡ ತಾಲೂಕ ವ್ಯಾಪ್ತಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಕೇಂದ್ರಸ್ಥಾನದಲ್ಲಿ ವಾಸಿಸಲು ನಿರ್ವಹಿಸಲು ನಿರಾಸಕ್ತಿ ತೋರುತ್ತಿರುವುದು ಕಂಡುಬರುತ್ತಿದೆ.
ತಾಲೂಕಿನ ಬಹುತೇಕ ಗ್ರಾಮ ಪಂಚಾಯಿತಿಗಳಲ್ಲಿ ಅಭಿವೃದ್ಧಿ ಅಧಿಕಾರಿಗಳು ಮುಂಜಾನೆ ಕರ್ತವ್ಯಕ್ಕೆ ಹಾಜರಾಗಿ ಸಾಯಂಕಾಲ ನಗರ ಪ್ರದೇಶಗಳಿಗೆ ತೆರಳುತ್ತಾರೆ. ಕೆಲ ಸಂದರ್ಭಗಳಲ್ಲAತೂ ಸಭೆಗಳ ಕಾರಣ ನೀಡುವ ಮೂಲಕ ಸಮಸ್ಯೆ ಹೊತ್ತು ಬರುವ ಜನರ ಕೈಗೆ ಅಭಿವೃದ್ಧಿ ಅಧಿಕಾರಿಗಳು ಸಿಗುವುದು ಅಪರೂಪವಾಗುತ್ತಿದೆ.
ಸ್ಥಳೀಯವಾಗಿ ಗ್ರಾಮ ಮಟ್ಟದಲ್ಲಿ ಅನೇಕ ಸಮಸ್ಯೆಗಳು ಉದ್ಭವಿಸುತ್ತವೆ ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸುವ ಜವಾಬ್ದಾರಿ ಸ್ಥಳೀಯ ಗ್ರಾಮ ಪಂಚಾಯಿತಿಗಳದ್ದಾಗಿರುತ್ತದೆ. ಸಮಸ್ಯೆಗಳನ್ನು ಪರಿಹರಿಸಬೇಕಾದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿ ವಾಸಿಸದೇ ಇರುವುದರಿಂದ ಗ್ರಾಮೀಣ ಜನರ ಸಮಸ್ಯೆಗಳಿಗೆ ಸಿಗಬೇಕಾದ ಪರಿಹಾರ ಗಗನ ಕುಸುಮವಾಗಿ ಕಂಡುಬರುತ್ತಿದೆ.

ಸರಕಾರದ ಆದೇಶವಿದ್ದರೂ ಕೂಡ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ವಾಸಿಸುತ್ತಿಲ್ಲ ಎಂಬ ದೂರುಗಳು ಬಂದ ಹಿನ್ನೆಲೆಯಲ್ಲಿ ಕೆಲ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸ್ಪಷ್ಟನೆ ಕೇಳಿ ನೋಟಿಸ್ ನೀಡಲಾಗಿದೆ.
-ರವಿಕುಮಾರ್ ಹುಕ್ಕೇರಿ.
ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಕೊಲ್ಹಾರ.

ಸರ್ಕಾರದ ಆದೇಶದಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಾರ್ಯದರ್ಶಿಗಳು ಹಾಗೂ ದ್ವಿತೀಯ ದರ್ಜೆ ಸಹಾಯಕರು ಕೇಂದ್ರ ಸ್ಥಾನದಲ್ಲಿ ವಾಸಿಸುವ ಮೂಲಕ ಜನರ ಕಷ್ಟಗಳಿಗೆ ಸ್ಪಂದಿಸಬೇಕಿದೆ.

-ಪ್ರದೀಪ್ ಪಾಟೀಲ್.
ಹಣಮಾಪುರ ಗ್ರಾ ಪಂ ಸದಸ್ಯರು ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಗ್ರಾಮ ಪಂಚಾಯತ್ ಸದಸ್ಯರ ಮಹಾ ಒಕ್ಕೂಟ, ಬೆಂಗಳೂರು.

 

 

ವರದಿ: ಮಶಾಕ ಬಳಗಾರ

Most Popular

To Top
error: Content is protected !!