Gummata Nagari

Bijapur

ಡೊಮನಾಳ ಹಳ್ಳದ ಬಳಿ ರಸ್ತೆ ಅಪಘಾತ : ಒರ್ವ ಸಾವು ಇನ್ನೊರ್ವ ಗಾಯ

 

ಬಿಜಾಪುರ: ಜಿಲ್ಲೆ ಹಾಗೂ ನೆರೆಯ ಮಹಾರಾಷ್ಟç ರಾಜ್ಯದ ಸೋಲಾಪುರ ಜಿಲ್ಲೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯ ಮೇಲೆ ಮಾರ್ಗ ಮಧ್ಯದ ಜಿಲ್ಲೆಯ ಡೊಮನಾಳ ಹಳ್ಳದ ಸಮೀಪ ಇಂದು( ಶನಿವಾರದಂದು) ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿ ಇನ್ನೊರ್ವ ಗಾಯಗೊಂಡ ಘಟನೆ ನಡೆದಿದೆ.

ಈ ರಸ್ತೆಯಲ್ಲಿ ವೇಗವಾಗಿ ಚಲಿಸುತ್ತಿರುವ ಕಾರು ಮತ್ತು ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ. ಮೃತಪಟ್ಟವರ ಗುರುತು, ವಿಳಾಸ ಇನ್ನೂ ಪತ್ತೆಯಾಗಿಲ್ಲ, ಗಾಯಾಳುಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲೆಯ ಹೋರ್ತಿ ಠಾಣೆಯ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಸ್ಥಳ ಪರಿಶೀಲನೆ ಕೈಗೊಂಡಿದ್ದಾರೆ.

Most Popular

To Top
error: Content is protected !!