Gummata Nagari

Bijapur

ಬೆಂಗಳೂರು: ಆಸ್ಪತ್ರೆಗಳಲ್ಲೂ ನೀರಿಗಾಗಿ ಪರದಾಟ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನೀರಿಗೆ ಹಾಹಾಕಾರ ಶುರುವಾಗಿದ್ದು ಕುಡಿಯುವ ನೀರಿಗಾಗಿ ಜನರು ವಾಟರ್ ಟ್ಯಾಂಕರ್ ಮೊರೆ ಹೋಗಿದ್ದಾರೆ. ಅನೇಕ ಮನೆಗಳಿಗೆ, ಏರಿಯಾಗಳಿಗೆ ವಾಟರ್ ಟ್ಯಾಂಕರ್ ನೀರು ಪೂರೈಕೆ ಮಾಡಲಾಗುತ್ತಿದೆ. ಮಳೆಯ ಅಭಾವ, ಅಂತರ್ಜಲ ಕುಸಿತದ ಪರಿಣಾಮ ಕೆರೆ, ಕಟ್ಟೆ, ಬೋರ್ವೆಲ್ಗಳಲ್ಲಿ ನೀರು ಇಂಗಿಹೋಗಿದೆ.

ಹೀಗಾಗಿ ಬೆಂಗಳೂರಿನಾದ್ಯoತ ಕುಡಿಯುವ ನೀರಿಗೆ ಭಾರಿ ಅಭಾವ ತಲೆದೋರಿದ್ದು ವಾಟರ್ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಈ ನೀರಿನ ಸಮಸ್ಯೆ ರಾಜಧಾನಿಯ ಆಸ್ಪತ್ರೆಗಳಲ್ಲೂ ತಲೆದೂರಿದೆ. ರೋಗಿಗಳು, ವೈದ್ಯರು ಹಾಗೂ ಸಿಬ್ಬಂದಿ ನೀರಿಲ್ಲದೆ ಪರದಾಡುತ್ತಿದ್ದಾರೆ. ಹೀಗಾಗಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಸುವಂತೆ ಖಾಸಗಿ ಆಸ್ಪತ್ರೆಗಳ ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಬೇಸಿಗೆ ಹಿನ್ನೆಲೆಯಲ್ಲಿ ಖಾಯಿಲೆಗಳು ಹೆಚ್ಚಾಗಿದ್ದು, ರೋಗಿಗಳ ಸಂಖ್ಯೆ ಅಧಿಕವಾಗಿದೆ. ರೋಗಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ನೀರಿನ ಬೇಡಿಕೆಯೂ ಹೆಚ್ಚಾಗಿದೆ. ಆಸ್ಪತ್ರೆಗಳಲ್ಲಿ ಬೇಡಿಕೆಯಷ್ಟು ನೀರು ಸಿಗುತ್ತಿಲ್ಲ. ಆಸ್ಪತ್ರೆಯಲ್ಲಿ ಒಂದು ಬೆಡ್ಗೆ ಕನಿಷ್ಠ 40 ಲೀಟರ್ ನೀರು ಬೇಕು. ಮೊದಲು ನೀರಿನ ಟ್ಯಾಂಕರ್ ಕೆಲವೆ ನಿಮಿಷಗಳಲ್ಲಿ ಬರುತ್ತಿತ್ತು. ಇದೀಗ ಟ್ಯಾಂಕರ್ ನೀರನ್ನು ಬುಕ್ ಮಾಡಿ, 2-3 ದಿನಗಳ ಬಳಿಕ ಬರುತ್ತಿವೆ ಎಂದು ಖಾಸಗಿ ಆಸ್ಪತ್ರೆಗಳ ಒಕ್ಕೂಟ ಸಮಸ್ಯೆ ತೋಡಿಕೊಂಡಿದೆ.
ಇದರಿAದ ರೊಗಿಗಳ ಚಿಕಿತ್ಸೆಗೆ ಸಮಸ್ಯೆಯಾಗಿದೆ. ಹೀಗಾಗಿ ಸರ್ಕಾರ ಆಸ್ಪತ್ರೆಗಳಿಗೆ ಕುಡಿಯುವ ನೀರನ್ನು ಸಮರ್ಪಕವಾಗಿ ಸರಬರಾಜು ಮಾಡಿ ಎಂದು ಖಾಸಗಿ ಆಸ್ಪತ್ರೆಗಳು ಸರ್ಕಾರಕ್ಕೆ ಮನವಿ ಮಾಡಿಕೊಂಡಿವೆ. ಆದರೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಶಾಲೆಗಳಲ್ಲಿ ಎದುರಾದ ನೀರಿನ ಸಮಸ್ಯೆ
ಸದ್ಯ ಶಾಲೆಗಳಲ್ಲಿ  ಪರೀಕ್ಷೆಗಳು ನಡೆಯುತ್ತಿವೆ. ಲಕ್ಷಾಂತರ ಮಕ್ಕಳು ಪರೀಕ್ಷೆ ಬರೆಯತ್ತಿದ್ದಾರೆ. ಆದರೆ ಸದ್ಯ ಶಾಲೆಗಳಲ್ಲಿ ನೀರು ಸಾಕಾಗುತ್ತಿಲ್ಲ. ಹೀಗಾಗಿ ಸರ್ಕಾರಿ ಹಾಗೂ ಖಾಸಗಿ ಶಾಲೆಯವರು ವಾಟರ್ ಕ್ಯಾನ್ಗಳನ್ನ ಹೊರಗಡೆಯಿಂದ ತಂದು ನೀರು ಕೊಡಬೇಕಾದ ಸ್ಥಿತಿ ಎದುರಾಗಿದೆ. ಹೀಗಾಗಿ ಪರೀಕ್ಷೆಗಳನ್ನ ನಡೆಸಲು ಶಿಕ್ಷಣ ಸಂಸ್ಥೆಗಳು ಪರದಾಡುತ್ತಿದ್ದು ಈ ಎಲ್ಲ ಪರೀಕ್ಷೆಗಳು ಮುಗಿಯುವ ವರೆಗೆ ಯಾದರೂ  ಕುಡಿಯುವ ನೀರು ನೀಡುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಸಿಎಂಗೆ ಪತ್ರ ಬರೆದು ಖಾಸಗಿ ಶಾಲೆಗಳ ಒಕ್ಕೂಟ ಮನವಿ ಮಾಡಿದೆ.
ಶಾಲೆಗಳಲ್ಲಿ ನೀರಿನ ಸಮಸ್ಯೆ ದೊಡ್ಡದಾಗಿದ್ದು ವಿದ್ಯಾರ್ಥಿಗಳು ಶಿಕ್ಷಕರು ಪರದಾಡುತ್ತಿದ್ದಾರೆ. ಹೀಗಾಗಿ ಪರೀಕ್ಷೆಗಳು ಕಂಪ್ಲೀಟ್ ಮುಗಿಯುವವರೆಗೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೀರು ಪೂರೈಸುವಂತೆ ಶಾಲೆಗಳ ಒಕ್ಕೂಟದಿಂದ ಸರ್ಕಾರಕ್ಕೆ ಒತ್ತಾಯ ಕೇಳಿ ಬಂದಿದ್ದು ಶಿಕ್ಷಣ ಸಚಿವರು ಕೂಡಾ ಶಾಲೆಗಳಲ್ಲಿನ ನೀರಿನ ಸಮಸ್ಯೆ ಇದೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುತ್ತೇವೆ ಎಂದಿದ್ದರು.

ಬೆoಗಳೂರಿನಲ್ಲಿ ಬೇಸಿಗೆ ಮುನ್ನವೆ ಒಂದೆಡೆ ನೀರಿಗೆ ಹಾಹಾಕಾರ ಶುರುವಾಗಿದ್ರೆ, ಮತ್ತೊಂದೆಡೆ ಟ್ಯಾಂಕರ್ ನೀರು ಸೇರಿದಂತೆ ಕಲುಷಿತ ನೀರಿನಿಂದ ಸಾಂಕ್ರಮಿಕ ಖಾಯಿಲೆಗಳ ಏರಿಕೆಯ ಬಿಸಿ ತಟ್ಟಿದೆ. ಈ ನಡುವೆ ಶಾಲಾ ಪರೀಕ್ಷೆಗಳಿಗೂ ನೀರಿನ ಬಿಸಿ ಎದುರಾಗಿದ್ದು ಸರ್ಕಾರ ಶಾಲೆಗಳಿಗೆ ಕುಡಿಯುವ ನೀರಿನ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಿದೆ.

Most Popular

To Top
error: Content is protected !!