Gummata Nagari

Bijapur

ಮಹಾಶಿವರಾತ್ರಿ ಅಂಗವಾಗಿ ಶಿವನ ವೇಷಭೂಷಣ ಸ್ಪರ್ಧೆ

 

ಬೆಳಗಾವಿ: ಇಲ್ಲಿನ ಮಹಿಳಾ ಕಲ್ಯಾಣ ಸಂಸ್ಥೆ ಹಾಗೂ ಜಯಭಾರತ ಫೌಂಡೇಶನ್ ಇವರ ಸಹಯೋಗದಲ್ಲಿ ಮಹಾಶಿವರಾತ್ರಿ ಅಂಗವಾಗಿ ಬಾಲವಾಡಿ ಮಕ್ಕಳಿಗಾಗಿ ಶಿವನ ವೇಷಭೂಷಣ ಧರಿಸುವ ಫ್ಯಾನ್ಸಿ ಡ್ರೆಸ್ ಸ್ಪರ್ಧೆಯನ್ನು ಬೆಳಗಾವಿ ನಗರದಲ್ಲಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅನುದಾನಿತ ಜಿಲ್ಲಾಪಂಚಾಯತಿ ಆವರಣದಲ್ಲಿಯ ಬಾಲವಾಡಿ, ಪೋಲಿಸ ಕಮಿಷನರ ಬಾಲವಾಡಿ ಹಾಗೂ ವಿವಿಧ ಬಾಲವಾಡಿಗಳಲ್ಲಿ ಆಯೋಜಿಸಲಾಗಿತ್ತು.
ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದ ಮಕ್ಕಳಿಗೆ ನಗದು ಬಹುಮಾನ ವಿತರಿಸಲಾಯಿತು, ಭಾಗವಹಿಸಿದ ಎಲ್ಲ ಮಕ್ಕಳಿಗೆ ಶೈಕ್ಷಣಿಕ ಸಲಕರಣೆಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಕಲ್ಯಾಣ ಸಂಸ್ಥೆಯ ಗೌರವ ಕಾರ್ಯದರ್ಶಿ ವೈಜಯಂತಿ ಚೌಗಲಾ ಹಾಗೂ ಶಾಹಿನಬಾನು ಹೊಂಬಳ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಸುಮಾರು 50 ಕ್ಕೂ ಹೆಚ್ಚಿನ ಮಕ್ಕಳು ಭಾಗವಹಿಸಿದ್ದರು.

Most Popular

To Top
error: Content is protected !!