Gummata Nagari

Bijapur

ರಾಜ್ಯ ಅಕ್ಕ ಮಹಾದೇವಿ ವಿಶ್ವ ವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮಕ್ಕೆ ಚಾಲನೆ

 

ಭಾರತೀಯರು ಸಹಬಾಳ್ವೆಯ ಜೀವನ ಸಾಗಿಸಬೇಕು: ವಾಂಖೇಡ

ಬಿಜಾಪುರ: ಭಾರತೀಯರಾದ ನಾವುನಿವೇಲ್ಲರೂ ಸಮಭಾವ ಸಹಬಾಳ್ವೆಯಿಂದ ಜೀವನವನ್ನು ಸಾಗಿಸಬೇಕು ಎಂದು ಅಮೇರಿಕದ ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯದ ಅಸೋಸಿಯೆಟ್ ಎಡಿಟರ್ ಡಾ.ಅಸಂಗ ವಾಂಖೇಡೆ ಹೇಳಿದರು.

ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಡಾ.ಬಿ ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಪರಿಶಿಷ್ಠ ಜಾತಿ/ ಪರಿಶಿಷ್ಠ ಪಂಗಡ ಕೋಶದ ವತಿಯಿಂದ ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಡಾ.ಬಿ ಆರ್ ಅಂಬೇಡ್ಕರ್‌ರವರ ಸಮಗ್ರತೆಯ ವಿಚಾರದÀಲ್ಲಿ ಸಾಮಾಜಿಕ ನ್ಯಾಯ ಮತ್ತು ಅದರ ಶ್ರೇಯೋಭಿವೃದ್ಧಿ ಹಾಗೂ ಭಾರತೀಯ ದಂಡ ಸಂಹಿತೆ ಮತ್ತು ಸಮಾನತೆಯ ಬಗ್ಗೆ ವಿದ್ಯಾರ್ಥಿನಿಯರಲ್ಲಿ ಜಾಗೃತಿ ಮೂಡಿಸಿದರು ಹಾಗೂ ಡಾ.ಬಿ ಆರ್ ಅಂಬೇಡ್ಕರ್ ರವರ ಜೀವನದ ಹೋರಾಟದ ಬಗ್ಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ವಿವಿಯ ಕುಲಪತಿ ಪ್ರೊ. ಬಿ ಕೆ ತುಳಸಿಮಾಲ ಮಾತನಾಡಿ, ಡಾ.ಬಿ ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಪ.ಜಾ/ಪ.ಪಂ ನಿಂದ ಇಂತಹ ವಿಶೇಷ ಉಪನ್ಯಾಸಗಳನ್ನು ಏರ್ಪಡಿಸುವುದರಿಂದ ವಿದ್ಯಾರ್ಥಿಗಳಿಗೆ ಅಭ್ಯಾಸ ಮಾರ್ಗದರ್ಶಿ ಲಭಿಸಿದಂತಾಗುತ್ತದೆ ಮತ್ತು ವಿದೇಶದಲ್ಲಿ ಪ.ಜಾ/ಪ.ಪಂದ ವಿದ್ಯಾರ್ಥಿಗಳಿಗೆ ಲಭಿಸುವ ಪ್ರಾಯೋಜಕತ್ವದ ಕುರಿತು ಮಾಹಿತಿ ಲಭಿಸುತ್ತಿದೆ, ಅಂತಹ ವಿದೇಶಿ ಪ್ರಾಯೋಜಕತ್ವಗಳನ್ನು ನಮ್ಮ ವಿದ್ಯಾರ್ಥಿನಿಯರು ಕೂಡಾ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, ಭಾರತೀಯರಾದ ನಾವು-ನೀವೆಲ್ಲ ಒಂದೇ, ಜಾತಿಮತ ಬೇಧಭಾವ ವಿಲ್ಲದೆ ಸಮಾನ ಮನಸ್ಸಿನಿಂದ ಬದುಕಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಪರಿಶಿಷ್ಠ ಜಾತಿ/ ಪರಿಶಿಷ್ಠ ಪಂಗಡ ಕೋಶದÀ ನಿರ್ದೇಶಕಿ ಪ್ರೊ ಲಕ್ಷಿö್ಮದೇವಿ ವಾಯ್, ಡಾ.ಬಿ ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕ ಡಾ ಸಂಜೀವಕುಮಾರ ಗಿರಿ, ವಿವಿಧ ಅಧ್ಯಯನ ವಿಭಾಗಗಳ ಭೋಧಕ, ಭೋಧಕೇತರ ವರ್ಗದವರು, ಸಂಶೋಧನಾ ವಿದ್ಯಾರ್ಥಿನಿಯರು, ಅತಿಥಿ ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಡಾ ಸಂಜೀವಕುಮಾರ ಗಿರಿ ಸ್ವಾಗತಿಸಿದರು. ಸಂಶೋಧನಾ ವಿದ್ಯಾರ್ಥಿನಿ ವಿದ್ಯಾಶ್ರೀ ಎನ್ ಸೂರ್ಯವಂಶಿ ಕಾರ್ಯಕ್ರಮ ನಿರೂಪಿಸಿದರು. ಜೈವಿಕ ಮಾಹಿತಿ ಅಧ್ಯಯನ ವಿಭಾಗದ ಸಂಯೋಜಕ ಡಾ. ಬಾಬು ಆರ್ ಎಲ್ ವಂದಿಸಿದರು.

Most Popular

To Top
error: Content is protected !!