ಪಂಜಾಬ್ ವಿರುದ್ಧ ಡೆಲ್ಲಿಗೆ ರೋಚಕ ಗೆಲುವು

0

Gummata Nagari : sports News

ಮುಂಬೈ: ಶಿಖರ್ ಧವನ್ ಹಾಗೂ ಪೃಥ್ವಿ ಶಾ ಅಬ್ಬರ ಬ್ಯಾಟಿಂಗ್‌ನಿಂದ ಡೆಲ್ಲಿ ಕ್ಯಾಪಿಟಲ್ಸ್‌ ತಂಡವು ಪಂಜಾಬ್ ಕಿಂಗ್ಸ್‌ ವಿರುದ್ಧ 6 ವಿಕೆಟ್‌ಗಳಿಂದ ರೋಚಕ ಗೆಲುವುದು ದಾಖಲಿಸಿದೆ.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 14ನೇ ಆವೃತ್ತಿಯ 11ನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಪಂಜಾಬ್ ತಂಡವು 196 ರನ್‌ಗಳ ಗುರಿ ನೀಡಿತ್ತು. ಈ ಟಾರ್ಗೆಟ್ ಬೆನ್ನಟ್ಟಿದ ಡೆಲ್ಲಿ ತಂಡವು 10 ಎಸೆತಗಳು ಬಾಕಿ ಇರುವಂತೆ 4 ವಿಕೆಟ್‌ ನಷ್ಟಕ್ಕೆ 198 ರನ್ ಚಚ್ಚಿ ಗೆದ್ದು ಬೀಗಿದೆ. ಡೆಲ್ಲಿ ಪರ ಶಿಖರ್ ಧವನ್ 92 ರನ್, ಪೃಥ್ವಿ ಶಾ 32 ರನ್, ಮಾರ್ಕಸ್ ಸ್ಟೋನಿಸ್ ಅಜೇಯ 27 ರನ್, ರಿಷಭ್ ಪಂತ್ 15 ರನ್ ಗಳಿಸಿದರು.

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ್ದ ಪಂಜಾಬ್ ತಂಡವು 4 ವಿಕೆಟ್ ನಷ್ಟಕ್ಕೆ 195 ರನ್‌ ದಾಖಲಿಸಿತ್ತು. ತಂಡದ ಪರ ಮಯಾಂಕ್ ಅಗರ್ವಾಲ್ 69 ರನ್ (36 ಎಸೆತ, 7 ಬೌಂಡರಿ, 4 ಸಿಕ್ಸರ್), ನಾಯಕ ಕೆ.ಎಲ್.ರಾಹುಲ್ 61 ರನ್ (51 ಎಸೆತ, 7 ಬೌಂಡರಿ, 2 ಸಿಕ್ಸರ್) ಸಿಡಿಸಿ ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದರು. ಆದರೆ ಬಳಿಕ ಬಂದ ಕ್ರಿಸ್ ಗೇಲ್ (11 ರನ್) ಹಾಗೂ ನಿಕೋಲಸ್ ಪೂರನ್ (9 ರನ್) ಬಹಳ ಹೊತ್ತು ಮೈದಾನದಲ್ಲಿ ಉಳಿಯಲಿಲ್ಲ. ಕೊಲೆಯಲ್ಲಿ ದೀಪಕ್ ಹೂಡಾ ಅಜೇಯ 22 ರನ್ (13 ಎಸೆತ) ಹಾಗೂ ಶಾರುಖ್ ಖಾನ್ ಅಜೇಯ 15 ರನ್ (5 ಎಸೆತ) ಚಚ್ಚಿದ್ದರು.

Gummata Nagari | Leading Kannada News Network in Vijayapura (Bijapur) ಕ್ಷಣ ಕ್ಷಣದ ಸುದ್ದಿ, ಮಾಹಿತಿ ಮನೋರಂಜನೆಗಾಗಿ ನಮ್ಮ FacebookTwitterYouTubeInstagram ಅನುಸರಿಸಿ..

Leave A Reply

Your email address will not be published.