Gummata Nagari

Headlines

ಪರೀಕ್ಷೆ ವೇಳೆ ಉತ್ತರ ಪತ್ರಿಕೆ ತೋರಿಸಿಲ್ಲವೆಂದು ಸಹಪಾಠಿಗೆ ಇರಿದ ಮೂವರು ವಿದ್ಯಾರ್ಥಿಗಳು

 

ಮಹಾರಾಷ್ಟç: ಪರೀಕ್ಷೆ ವೇಳೆ ಉತ್ತರ ಪತ್ರಿಕೆ ತೋರಿಸಿಲ್ಲ ಎನ್ನುವ ಕಾರಣಕ್ಕೆ ಮೂವರು ವಿದ್ಯಾರ್ಥಿಗಳು ಸಹಪಾಠಿಯನ್ನು ಚಾಕುವಿನಿಂದ ಇರಿದಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ಪಟ್ಟಣದಲ್ಲಿ 10 ನೇ ತರಗತಿಯ ಲಿಖಿತ ಪರೀಕ್ಷೆಯಲ್ಲಿ ಉತ್ತರ ಪತ್ರಿಕೆಯನ್ನು ತೋರಿಸಲು ನಿರಾಕರಿಸಿದ ಕಾರಣ ಮೂವರು ವಿದ್ಯಾರ್ಥಿಗಳು ಸಹಪಾಠಿ ಮೇಲೆ ಹಲ್ಲೆ ನಡೆಸಿದ್ದಾರೆ.

ಪರೀಕ್ಷೆಯ ನಂತರ ಶಾಲೆಯೊಂದರಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ಗಾಯಗೊಂಡ ವಿದ್ಯಾರ್ಥಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪರೀಕ್ಷೆ ಬರೆಯುತ್ತಿದ್ದ ವೇಳೆ ಈ ಮೂವರು ವಿದ್ಯಾರ್ಥಿಗಳು ಉತ್ತರ ಪತ್ರಿಕೆ ತೋರಿಸುವಂತೆ ಒತ್ತಡ ಹೇರಿದ್ದರು ಆದರೂ ಆ ವಿದ್ಯಾರ್ಥಿ ಇವರ ಮಾತಿಗೆ ಗಮನ ಕೊಟ್ಟಿರಲಿಲ್ಲ.

ಇದರಿಂದ ಕೋಪಗೊಂಡ ಮೂವರು ಪರೀಕ್ಷಾ ಹಾಲ್‌ನಿಂದ ಹೊರಬಂದ ತಕ್ಷಣ ಆತನನ್ನು ಹಿಡಿದು ಥಳಿಸಿದ್ದಾರೆ. ಅವರು ಆತನಿಗೆ ಇರಿದಿದ್ದಾರೆ. ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈಗ ಡಿಸ್ಚಾರ್ಜ್ ಮಾಡಲಾಗಿದೆ.

ಮೂವರು ಅಪ್ರಾಪ್ತ ಆರೋಪಿಗಳ ವಿರುದ್ಧ ಭಿವಂಡಿಯ ಶಾಂತಿ ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆ (IPಅ) ಸೆಕ್ಷನ್ 324 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಶಸ್ತ್ರಾಸ್ತ್ರ ಅಥವಾ ವಿಧಾನಗಳಿಂದ ಗಾಯಗೊಳಿಸುವುದು) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

Most Popular

To Top
error: Content is protected !!