Gummata Nagari

Headlines

ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮತದಾನ ಪ್ರತಿಜ್ಞಾವಿಧಿ ಬೋಧನೆ

 

 

ಬಿಜಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಘಟಕ ವಿಜಯಪುರ ಇವರ ಸಹಯೋಗದಲ್ಲಿ ಇಂದು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದಲ್ಲಿ ಸಭಿಕರಿಗೆ ಲೋಕಸಭಾ ಚುನಾವಣೆ ನಿಮಿತ್ಯ ಮತದಾನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿ, ಪ್ರಸ್ತುತ ವರ್ಷ ಲೋಕಸಭಾ ಚುನಾವಣೆ-೨೦೨೪ ಗೆ ವಿಶೇಷವಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಯಶಸ್ವಿಗೊಳಿಸಲು ಉದ್ದೇಶಿಸಲಾಗಿದೆ. ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಶೇಕಡಾ ನೂರರಷ್ಟು ಮತದಾನಕ್ಕೆ ನಾವೆಲ್ಲರೂ ಶ್ರಮಿಸೋಣ ಎಂದು ಕರೆ ನೀಡಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ(ಪ್ರಭಾರ) ಕೆ. ಹೊಂಗಯ್ಯ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ ಶೆಡಶ್ಯಾಳ, ಜಿಲ್ಲಾ ಕಾರ್ಯದರ್ಶಿ ರಾಜಶೇಖರ ಧೈವಾಡಿ, ಕ್ರೀಡಾ ಕಾರ್ಯದರ್ಶಿ ಎಸ್. ಎಸ್. ಕೆರೂರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ವಿಜಯಕುಮಾರ ಹತ್ತಿ, ಗೌರವಾಧ್ಯಕ್ಷ ವಿಶ್ವನಾಥ ಬೆಳೆನ್ನವರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಗಂಗಾಧರ ಜೇವೂರ, ಇನ್ನೋರ್ವ ಕ್ರೀಡಾ ಕಾರ್ಯದರ್ಶಿ ನಿಜು ಮೇಲಿನಕೇರಿ, ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತರಾದ ಜಾವೀದ ಜಮಾದಾರ, ನ್ಯಾಯವಾದಿ ನಾಗರಾಜ ಲಂಬು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲ ಜಿಲ್ಲಾ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರುಗಳು, ಪದಾಧಿಕಾರಿಗಳು, ಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರು ಉಪಸ್ಥಿತರಿದ್ದರು.
(

Most Popular

To Top
error: Content is protected !!